ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪಿಎಂ ನರೇಂದ್ರ ಮೋದಿ ಸಭೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23:  ನಾಲ್ಕನೇ ಹಂತದ ಅಲ್​ಲಾಕ್ ಅಂತ್ಯಗೊಳ್ಳುತ್ತಿದೆ. ಸೆ. 30ರ ನಂತರದ ಐದನೇ ಹಂತದ ಲಾಕ್​ಡೌನ್ ಸಡಿಲಿಕೆ ಹೇಗಿರುತ್ತದೆ ಎಂಬುದು ಇನ್ನೂ ಗೊತ್ತಾಗಿಲ್ಲ. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಸೇರಿದಂತೆ ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಸಭೆ ನಡೆಸುತ್ತಿದ್ದಾರೆ.

 

 

ಕರ್ನಾಟಕ ಅಲ್ಲದೆ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು, ದೆಹಲಿ ಮತ್ತು ಪಂಜಾಬ್ ರಾಜ್ಯಗಳ ಸಿಎಂಗಳು ಆನ್​ಲೈನ್​ನಲ್ಲಿ ನಡೆಯುವ ಈ ಸಭೆಯಲ್ಲಿ ಪ್ರಧಾನಿ ಜೊತೆ ಸಂವಾದ ನಡೆಸಲಿದ್ದಾರೆ. ದೇಶದಲ್ಲಿ ಕೊರೋನಾ ಪ್ರಕರಣಗಳು ಅತಿ ಹೆಚ್ಚು ಇರುವುದು ಈ ಏಳು ರಾಜ್ಯಗಳಲ್ಲೇ. ದೇಶದ ಶೇ. 63ರಷ್ಟು ಪ್ರಕರಣಗಳು ಈ ಏಳು ರಾಜ್ಯಗಳಲ್ಲೇ ಇವೆ. ಈ ಹಿನ್ನೆಲೆಯಲ್ಲಿ ಪ್ರಧಾನಿಗಳು ಈ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ವಾಸ್ತವ ಪರಿಸ್ಥಿತಿ ಹಾಗೂ ಸಹಾಯ ಅಗತ್ಯತೆ ಬಗ್ಗೆ ವಿಚಾರಿಸುವ ಸಾಧ್ಯತೆ ಇದೆ.

Also Read  ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿ..!➤ಇಬ್ಬರು ಮೃತ್ಯು

 

 

 

 

ಕೊರೋನಾ ನಿಯಂತ್ರಣದಲ್ಲಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ವಿವಿಧ ಸ್ತರಗಳಲ್ಲಿ ಸಹಕಾರ ನೀಡುತ್ತಾ ಬಂದಿದೆ. ಈಗ ಕೊರೋನಾ ಅತಿ ಹೆಚ್ಚು ಇರುವ ಏಳು ರಾಜ್ಯಗಳಲ್ಲಿ ಮುಂದೆ ಯಾವ ಕಾರ್ಯತಂತ್ರ ಅನುಸರಿಸಬಹುದು, ಯಾವ್ಯಾವ ರೀತಿಯ ನೆರವಿನ ಅಗತ್ಯ ಇದೆ ಎಂಬುದನ್ನು ಪ್ರಧಾನಿಗಳು ಇಂದು ಸಮಾಲೋಚಿಸಲಿದ್ದಾರೆ.ದೇಶದಲ್ಲಿ ಇಲ್ಲಿಯವರೆಗೆ ದಾಖಲಾಗಿರುವ ಒಟ್ಟು ಕೊರೋನಾ ಪ್ರಕರಣಗಳ ಸಂಖ್ಯೆ 56 ಲಕ್ಷ ದಾಟಿ ಹೋಗಿದೆ. ಸಾವಿನ ಸಂಖ್ಯೆ 90 ಸಾವಿರ ಗಡಿ ದಾಟಿದೆ.

Also Read  ಸುಬ್ರಹ್ಮಣ್ಯ : ರವಿ ಕಕ್ಕೆಪದವುರವರಿಗೆ ಮಾತೃವಿಯೋಗ

 

 

error: Content is protected !!
Scroll to Top