ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸೇವಾನಿರತೆಗೆ ದೊಣ್ಣೆಯಿಂದ ಹಲ್ಲೆ ► 2.50 ಲಕ್ಷ ರೂ. ದರೋಡೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.20, ಶ್ರೀಕ್ಷೇತ್ರ ಧರ್ಮಸ್ಥಳದ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ ಸೇವಾನಿರತೆಯ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಸುಮಾರು 2.50 ಲಕ್ಷ ರೂ. ಹಣವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ಕುಂದಾಪುರ ತಾಲೂಕಿನ ರಟ್ಟಾಡಿ ಗ್ರಾಮದಲ್ಲಿ ನಡೆದಿದೆ.

ಪ್ರೀತಿ(24) ಹಲ್ಲೆಗೆ ಒಳಗಾದ ಯುವತಿ. ಹೆಲ್ಮೆಟ್ ಹಾಕಿಕೊಂಡು ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಸಾಲ ಯೋಜನೆಯ ಹಣ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ, ಸುಮಾರು 2.50 ಲಕ್ಷ ರೂಪಾಯಿಯನ್ನು ದರೋಡೆ ಮಾಡಿದ್ದಾರೆ.

 

Also Read  ಸೆಲ್ಫಿ ನಿರಾಕರಣೆ ➤ಕ್ರಿಕೆಟ್ ಆಟಗಾರ ಪೃಥ್ವಿ ಶಾ ಸ್ನೇಹಿತನ ಕಾರಿನ ಮೇಲೆ ದಾಳಿ

ರಟ್ಟಾಡಿ ಗ್ರಾಮದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಿಬ್ಬಂದಿಯಾಗಿದ್ದ ಪ್ರೀತಿ ಎರಡು ಒಕ್ಕೂಟದ ಹಣವನ್ನು ಸಂಗ್ರಹಿಸುತ್ತಿದ್ದರು. ಯುವತಿಯ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿ ಕಾಲು ಮುರಿದಿದ್ದು, ಯುವತಿಯನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಗಾಯಾಳು ಪ್ರೀತಿ ನೀಡಿದ ದೂರನ್ನು ದಾಖಲಿಸಿಕೊಂಡು ದರೋಡೆಕೋರರಿಗೆ ಬಲೆ ಬೀಸಿದ್ದಾರೆ.

error: Content is protected !!
Scroll to Top