ಸುಳ್ಯ ಆರೋಗ್ಯ ಇಲಾಖೆಯ ನೌಕರರಿಂದ ಪ್ರತಿಭಟನೆ ➤ ನಾಳೆಯಿಂದ ಅನಿರ್ಧಿಷ್ಟಾವದಿ ಮುಷ್ಕರಕ್ಕೆ ಕರೆ!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 23:  ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ(ರಿ) ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಸುಳ್ಯದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಗುತ್ತಿಗೆ ಹಾಗು ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.

ಕೋರೋನಾ ನಡುವೆ ಕೋವಿಡ್ ವಾರಿಯರ್ಸ್ ಗಾಳಗಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಆರೋಗ್ಯ ಮತ್ತು ಜೀವ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ ನೌಕರರು ನಾಳೆಯು ಮುಷ್ಕರಕ್ಕೆ ಕರೆ ನೀಡಿದ್ದಾರೆ.

Also Read  ಧರ್ಮಸ್ಥಳ: ಮಹಿಳೆ ಮೇಲೆ ಮರ ಬಿದ್ದು ಸ್ಥಳದಲ್ಲೇ ಮೃತ್ಯು

error: Content is protected !!
Scroll to Top