(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.23. ಕೇಂದ್ರ ರೈಲ್ವೇ ಸಚಿವ, ಬೆಳಗಾವಿಯ ಬಿಜೆಪಿ ಸಂಸದ ಸುರೇಶ್ ಅಂಗಡಿ ಕೊರೋನಾ ಸೋಂಕಿನಿಂದ ಬುಧವಾರ ರಾತ್ರಿ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಕಳೆದ ಎರಡು ದಶಕಗಳಿಂದ ಬೆಳಗಾವಿ ಸಂಸದರಾಗಿರುವ ಸುರೇಶ್ ಅಂಗಡಿ 1955ರ ಜೂನ್ 1 ರಂದು ಬೆಳಗಾವಿಯ ಕೆ.ಕೆ. ಕೊಪ್ಪ ಗ್ರಾಮದಲ್ಲಿ ಜನಿಸಿದ್ದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ 2004 ರಿಂದ ಸತತವಾಗಿ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಇವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.