ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24: ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು 66ನೇ ವಯಸ್ಸಿನಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಕೋವಿಡ್‌ನಿಂದ ನವದೆಹಲಿಯ ಏಮ್ಸ್‌ ಅಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದರು.

 

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿ ಸಂಸದರಾಗಿದ್ದ ಸುರೇಶ್ ಅಂಗಡಿ ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ಮೊದಲ ಕೇಂದ್ರ ಸಚಿವರು. ಗೈಡ್​ಲೈನ್ಸ್​ ಪ್ರಕಾರ ಕೊರೊನಾ ಸೋಂಕಿಗೀಡಾಗಿ ನಿಧನರಾದವರ ಮೃತದೇಹವನ್ನ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಕೊಂಡೊಯ್ಯುವಂತಿಲ್ಲ.

 

Also Read  ಮರ್ಧಾಳ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

 

ಈ ಹಿನ್ನೆಲೆ ಸುರೇಶ್​ ಅಂಗಡಿಯವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸಲಾಗ್ತಿದೆ. ದೆಹಲಿಯ ಲೋದಿ ಗಾರ್ಡನ್ ರಸ್ತೆಯಲ್ಲಿರುವ ಚಿತಾಗಾರದಲ್ಲೇ ಕೋವಿಡ್ ನಿಯಮಾವಳಿ ಪ್ರಕಾರ ಸುರೇಶ್ ಅಂಗಡಿ ಅವರ ಅಂತ್ಯಸಂಸ್ಕಾರ ನಡೆಯಲಿದೆ. ಇಂದು ಬೆಳಿಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಲಿದ್ದು ಅಂತ್ಯ ಸಂಸ್ಕಾರದಲ್ಲಿ ಕುಟುಂಬಸ್ಥರಿಗಷ್ಟೇ ಪಾಲ್ಗೊಳ್ಳಲು ಅವಕಾಶವಿದೆ.

error: Content is protected !!
Scroll to Top