ಮಂಗಳೂರು: ಇಂದಿನಿಂದ ಪಿಲಿಕುಳ ನಿಸರ್ಗಧಾಮವು ಸಾರ್ವಜನಿಕ ವೀಕ್ಷಣೆಗೆ ಮುಕ್ತ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದವನ್ನು ಇಂದಿನಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತ ಪ್ರವೇಶ ನೀಡಲಾಗುವುದು ಎಂದು ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ನಿಸರ್ಗಧಾಮದ ಮೃಗಾಲಯ, ಲೇಕ್‍ ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕೃತಿ ಗ್ರಾಮವನ್ನು (ವಿಜ್ಞಾನಕೇಂದ್ರ ಮತ್ತು ತಾರಾಲಯ ಹೊರತುಪಡಿಸಿ) ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ತಿಳಿಸಿದೆ.

ವೀಕ್ಷಕರು ಸರಕಾರದ ಆದೇಶದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ವೀಕ್ಷಿಸಬಹುದು ಹಾಗೂ ಪ್ರತೀ ಸೋಮವಾರ ವಾರದ ರಜಾ ದಿನವಾಗಿರುತ್ತದೆ ಎಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Also Read  ರಾಜ್ಯ ಸರಕಾರದಿಂದ ಭರ್ಜರಿ ಗುಡ್ ನ್ಯೂಸ್ - ಗೃಹಜ್ಯೋತಿ ಯೋಜನೆಯಡಿ ಮೂರು ಜ್ಯೋತಿಗಳು ವಿಲೀನ

 

error: Content is protected !!
Scroll to Top