ಮತ್ತೆ ಕರ್ನಾಟಕದಲ್ಲಿ ಲಾಕ್ ಡೌನ್ ಇಲ್ಲ ➤ ಡಿಸಿಎಂ ಅಶ್ವತ್ಥ್ ನಾರಾಯಣ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 24:  ಕೊರೋನಾ ಸೋಂಕಿನ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣ, ಕಳೆದ ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಸಿಎಂ ಯಡಿಯೂರಪ್ಪ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ನಲ್ಲಿ ಕೊರೋನಾ ಕಂಟ್ರೋಲ್ ಗಾಗಿ ಲಾಕ್ ಡೌನ್ ಸಲಹೆ ನೀಡಿದ್ದರು. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗಲಿದೆ ಎನ್ನುವ ಕುರಿತಂತೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ್ ನಾರಾಯಣ್, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

 

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಪ್ರಧಾನಿಯವರು ಸೂಚಿಸಿದ್ದಾರೆ. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದ್ದೇವೆ. ಅದರ ಹೊರತಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

Also Read  ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ➤ ಸಚಿವ ಬಿ.ಸಿ. ನಾಗೇಶ್

 

 

error: Content is protected !!
Scroll to Top