ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ಓರ್ವನನ್ನು ಹತ್ಯೆಗೈದ ಭಾರತೀಯ ಸೇನಾಪಡೆ

(ನ್ಯೂಸ್ ಕಡಬ) newskadaba.com ಜಮ್ಮು- ಕಾಶ್ಮೀರ, ಸೆ. 24. ಭಾರತೀಯ ಸೇನಾಪಡೆಯು ನಡೆಸಿದ ಎನ್‌ ಕೌಂಟರ್‌ ನಲ್ಲಿ ಓರ್ವ ಉಗ್ರನನ್ನು ಹತ್ಯೆಗೈದ ಘಟನೆ ಇಂದು ಜಮ್ಮು- ಕಾಶ್ಮೀರದ ಅವಂತಿಪೋರಾದಲ್ಲಿ ನಡೆದಿದೆ.

ಶತ್ರುಗಳ ಅನುಮಾನಾಸ್ಪದ ಚಲನವಲನಗಳು ಕಂಡು ಬಂದ ಹಿನ್ನೆಲೆಯಲ್ಲಿ ಅವಂತಿಪೋರಾದ ತ್ರಾಲ್ ನಲ್ಲಿರುವ ಮಗಾಮ ಎಂಬ ಪ್ರದೇಶದಲ್ಲಿ ಭಾರತೀಯ ಸೇನೆಯು ಕಾರ್ಯಾಚರಣೆ ಪ್ರಾರಂಭಿಸಿತ್ತು.

ಕಾರ್ಯಾಚರಣೆಯ ವೇಳೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಉಗ್ರರನ್ನು ತಕ್ಷಣ ಕಾರ್ಯಾಚರಣೆಗಿಳಿದ ಸೇನಾಪಡೆಯು ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

Also Read  ಮಂಗಳೂರು: 4 ವರ್ಷದ ಮಗುವಿನೊಂದಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ     

error: Content is protected !!
Scroll to Top