ಹಿರಿಯ ವಿದ್ವಾಂಸ, ಖಾಝಿ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ನಿಧನಕ್ಕೆ ಟಿ.ಎಂ ಶಹೀದ್ ತೆಕ್ಕಿಲ್ ಸಂತಾಪ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಹಿರಿಯ ವಿದ್ವಾಂಸ, ಉಡುಪಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಖಾಝಿ ಅಲ್ಹಾಜ್ ಪಿ.ಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಅವರ ನಿಧನಕ್ಕೆ ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಹಾಗೂ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿರುತ್ತಾರೆ.

ಕರ್ಮಶಾಸ್ತ್ರ ಹಾಗೂ ಖಗೋಳಶಾಸ್ತ್ರದ ಬಗ್ಗೆ ಉನ್ನತ ಜ್ಞಾನ ಹೊಂದಿರುವ ಇವರು ಸುನ್ನೀ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿ, ಜಾಮಿಯಾ ಸ-ಅದಿಯ ಅರೇಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರಾಗಿ, ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರದ ಸದಸ್ಯರಾಗಿ ಸೇವೆ ಸಲ್ಲಿಸಿರುವ ಶ್ರೀಯುತರ ನಿಧನದಿಂದ ಉಲಮಾ ವರ್ಗಕ್ಕೆ ಮತ್ತು ಮುಸ್ಲಿಂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲುವಿಕೆಯಿಂದ ಕುಟುಂಬದವರ ದುಃಖವನ್ನು ಸಹಿಸುವ ಶಕ್ತಿಯನ್ನು ಅಲ್ಲಾಹು ಕರುಣಿಸಲಿ ಮತ್ತು ಮಗ್ಫಿರತನ್ನು ಅನುಗ್ರಹಿಸಲಿ ಎಂದು ಟಿ.ಎಂ ಶಹೀದ್ ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿರುತ್ತಾರೆ.

Also Read  ತಾಯಿಯನ್ನು ಕೊಂದು ಮೃತದೇಹವನ್ನು ಸೂಟ್ಕೇಸ್ ನಲ್ಲಿಟ್ಟು ಠಾಣೆಗೆ ತಂದ ಪುತ್ರಿ ➤ ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ

error: Content is protected !!
Scroll to Top