ಎಸ್.ಪಿ.ಬಿ ಆರೋಗ್ಯದಲ್ಲಿ ಮತ್ತೆ ಏರುಪೇರು

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ‌. 24. ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಮತ್ತೆ ಕ್ಷೀಣಿಸಿದೆ.

 


ಎಸ್​.ಪಿ.ಬಿ ಅವರಿಗೆ ಆಗಸ್ಟ್ 5ರಂದು ಕೊರೋನಾ ದೃಢಪಟ್ಟಿದ್ದರಿಂದ ಅದೇ ದಿನ ಚೆನ್ನೈನ ಎಂ.ಜಿ.ಎಂ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಗಸ್ಟ್ 28ರಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು.

ಇನ್ನೇನು ಬಿಡುಗಡೆಯಾಗುವಷ್ಟರಲ್ಲಿ ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕೆಲವು ದಿನಗಳಿಂದ ಆರೋಗ್ಯ ಸ್ಥಿತಿ ಬಿಗಡಾಯಿಸುತ್ತಿದ್ದು, ಯಾವುದೇ ಚೇತರಿಕೆ ಕಂಡುಬಂದಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಈಗಲೂ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದಿದ್ದಾರೆ. ಹೀಗಾಗಿ ಕುಟುಂಬ ಮತ್ತು ಅಭಿಮಾನಿಗಳಲ್ಲಿ ಮತ್ತೆ ಆತಂಕ ಮನೆ ಮಾಡಿದೆ.

Also Read  ತರಕಾರಿ ವಾಹನದಲ್ಲಿ ಅಕ್ರಮ ಗೋಸಾಗಾಟ

error: Content is protected !!
Scroll to Top