ವಿಟ್ಲ: ಮಹಿಳೆಯ ಕತ್ತಿನಲ್ಲಿದ್ದ ಕರಿಮಣಿ ಸರ ಕದ್ದೊಯ್ದ ಪ್ರಕರಣ ➤ ಓರ್ವ ಮಹಿಳೆ ಹಾಗೂ ಕಡಬ ತಾಲೂಕಿನ ಮೂವರ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 24. ದ್ವಿಚಕ್ರ ವಾಹನದಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆಯ ಸಹಿತ ಒಟ್ಟು ನಾಲ್ವರು ಆರೋಪಿಗಳನ್ನು ವಿಟ್ಲ ಎಸ್.ಐ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಸವಣೂರು ನಿವಾಸಿಗಳಾದ ಮಹಮ್ಮದ್ ಶಾಕೀರ್ (23), ಮಹಮ್ಮದ್ ಇಕ್ಬಾಲ್ (24), ಕೆ.ಎ ಮಹಮ್ಮದ್ ಯಾನೆ ಐಟಿ ಮಮ್ಮು (41) ಹಾಗೂ ತಿಂಗಳಾಡಿ ನಿವಾಸಿ ಹಾಜಿರಾ(44) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 20,650 ರೂ.ನಗದು ಹಾಗೂ ಕುಂಬ್ರದ ಬ್ಯಾಂಕ್ ನಲ್ಲಿ ಅಡವಿಟ್ಟ ಕಳವುಗೈದ ಕರಿಮಣಿ ಸರ ಕೃತ್ಯಕ್ಕೆ ಬಳಸಿದ ಹೋಂಡಾ ಆಕ್ಟೀವಾ ಒಂದನ್ನು ವಶಕ್ಕೆ ಪಡೆಯಲಾಗಿದೆ.

Also Read  ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಶೌಚಾಲಯದ ಗುಂಡಿ ನಿರ್ಮಾಣ

ಬಂಟ್ವಾಳ ವೃತ್ತ ನಿರೀಕ್ಷಕ ನಾಗರಾಜ್ ಟಿ.ಡಿ ಮಾರ್ಗದರ್ಶನದಲ್ಲಿ ವಿಟ್ಲ ಎಸ್. ಐ ವಿನೋದ್ ಕುಮಾರ್ ರೆಡ್ಡಿ, ಡಿಸಿಐಬಿ ತಂಡದ ಪ್ರವೀಣ್ ರೈ ಹಾಗೂ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಗಳ ತಂಡವು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

error: Content is protected !!
Scroll to Top