(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.24. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ಸಾರ್ವಜನಿಕರ ಕೋವಿಡ್ ಪರೀಕ್ಷೆಯನ್ನು ನಡೆಸಿ ಒಂದು ವಾರದೊಳಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಿಂದ ಸುತ್ತೋಲೆ ಹೊರಡಿಸಲಾಗಿದೆ.
ಈ ಬಗ್ಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಸಲ್ಪಡುವ ಶಿಬಿರಗಳ ದಿನಾಂಕ ಮತ್ತು ಮಾಹಿತಿಯನ್ನು ಜಿಲ್ಲಾ ಪಂಚಾಯತ್ ನಿಂದಲೇ ನಿಗದಿಪಡಿಸಲಾಗಿದ್ದು, ವಿವಿಧ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ಸೆಪ್ಟೆಂಬರ್ 28 ರಿಂದ ಕೋವಿಡ್ – 19 ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗಿದೆ. ಈ ಮೂಲಕ ಕೊರೋನಾ ತಪಾಸಣೆ ಮಾಡಲು ಹಿಂಜರಿಯುವವರಿಗೆ ಸರಕಾರದಿಂದ ಬಿಸಿ ಮುಟ್ಟಿಸಲಾಗಿದೆ.