ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ➤ ನಾಲ್ವರ ದುರ್ಮರಣ



(ನ್ಯೂಸ್ ಕಡಬ) newskadaba.com ಶಿರಸಿ, ಸೆ. 25. ಕಾರು ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಯಲ್ಲಾಪುರ ವ್ಯಾಪ್ತಿಯ ರಾ.ಹೆ. 63ರ ಹೊಸಳ್ಳಿ ಎಂಬಲ್ಲಿ ನಡೆದಿದೆ.





ದೆಹಲಿ ಪಾಸಿಂಗ್ ಇರುವ ಕಾರೊಂದು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿದ್ದು, ಈ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರು ಉತ್ತರ ಭಾರತದಿಂದ ದಕ್ಷಿಣ ಭಾರತಕ್ಕೆ ಪ್ರವಾಸಕ್ಕೆ ಹೊರಟಿದ್ದರು ಎನ್ನಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.






error: Content is protected !!
Scroll to Top