ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!!

(ನ್ಯೂಸ್ ಕಡಬ) newskadaba.com ಚೆನ್ನೈ , ಸೆ. 25:  ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.

 

 

 

ಕೊರೊನಾ ಹಿನ್ನಲೆ ಅಗಸ್ಟ್ 5 ರಂದು ಚೆನೈ ನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ ಎಸ್ ಪಿಬಿ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಅವರನ್ನು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ನಂತರ ಚಿಕಿತ್ಸೆಗೆ ಸ್ಪಂದಿಸಿದ ಅವರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದರು. ಕಳೆದ ವಾರ ಎಸ್ಪಿ ಅವರ ಮಗ ಚರಣ್ ಅವರು ತಂದೆ ಗುಣಮುಖರಾಗಿದ್ದು, ಇನ್ನು ಕೆಲವೆ ದಿನಗಳಲ್ಲಿ ಅವರನ್ನು ಮನೆಗೆ ಕರೆದುಕೊಂಡು ಹೋಗಲಾಗುವುದು ಎಂದು ತಿಳಿಸಿದ್ದರು.ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅವರು ತೀವ್ರ ವಾಗಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಎಂಜಿಎಂ ಹೆಲ್ತ್ ಕೇರ್ ನ ತಜ್ಞರ ತಂಡ ಅವರ ಆರೋಗ್ಯ ಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ನಿಗಾ ವಹಿಸುತ್ತಿದೆ’ ಎಂದು ತಿಳಿಸಿದ್ದಾರೆ.

Also Read  ಶಿಶಿಲ ಪ್ರವಾಸಿಗರ ನಿಷೇಧ ಮಾಡುವಂತೆ ಗ್ರಾಮಸ್ಥರ ಒತ್ತಾಯ

 

 

error: Content is protected !!
Scroll to Top