ಕೋವಿಡ್‌ಗೆ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25:  ಕೊರೊನಾದಿಂದ ಬೀದರ್ ನ ಬಸವಕಲ್ಯಾಣದ ಶಾಸಕ ಬಿ.ನಾರಾಯಣರಾವ್ ಅವರು ತಮ್ಮ 65 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಧಾಹ್ನ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ.

 

ಅಗಸ್ಟ್ 31 ರಂದು ನಾರಾಯಣ್ ರಾವ್ ಅವರಿಗೆ ಕೊರೊನಾ ಸೋಂಕು ಇರುವುದು ಧೃಡಪಟ್ಟಿತ್ತು.ತದನಂತರ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ದಿನ ವಿಧಿವಶರಾಗಿದ್ದಾರೆ. ಶಾಸಕರ ನಿಧನಕ್ಕೆ ಸಿಎಂ ಬಿ.ಎಸ್.​ ಯಡಿಯೂರಪ್ಪ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.

Also Read  ಬಂಟ್ವಾಳ :ಮತ ಚಲಾಯಿಸಿದ ಮಾಜಿ ಸಚಿವ ರಮಾನಾಥ ರೈ

 

error: Content is protected !!
Scroll to Top