(ನ್ಯೂಸ್ ಕಡಬ) newskadaba.com ಚೆನ್ನೈ , ಸೆ. 25: ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ವಿಧಿವಶರಾಗಿದ್ದಾರೆ.ಭಾರತ ಚಿತ್ರರಂಗ ಕಂಡ ಮಹಾನ್ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ(74) ಇನ್ನಿಲ್ಲ. ಕೊರೋನಾ ಸೋಂಕಿನಿಂದಾಗಿ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ 1.04ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಮಗ ಚರಣ್ ತಿಳಿಸಿದ್ದಾರೆ.ಕಳೆದ 50 ವರ್ಷಗಳಿಂದ ಅನೇಕ ಭಾಷೆಗಳಲ್ಲಿ ಹಾಡುವ ಮೂಲಕ ಹಾಗೂ ಕೆಲವು ಸಿನಿಮಾಗಳಲ್ಲಿ ನಟಿಸುತ್ತಾ ರಂಜಿಸಿದ್ದಾರೆ ಖ್ಯಾತ ಗಾಯಕ ಬಾಲಸುಬ್ರಹ್ಮಣ್ಯಂ. 16 ಭಾಷೆಗಳಲ್ಲಿ ಹಾಡುಗಳನ್ನು ಹಾಡಿರುವ ಬಾಲಸುಬ್ರಹ್ಮಣ್ಯಂ.
ಕೊರೊನಾ ಹಿನ್ನಲೆ ಅಗಸ್ಟ್ 5 ರಂದು ಚೆನೈ ನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ ಎಸ್ ಪಿಬಿ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಅವರನ್ನು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ನಂತರ ಚಿಕಿತ್ಸೆಗೆ ಸ್ಪಂದಿಸಿದ ಅವರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದರು. ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅವರು ತೀವ್ರ ವಾಗಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಎಂಜಿಎಂ ಹೆಲ್ತ್ ಕೇರ್ ನ ತಜ್ಞರ ತಂಡ ಅವರ ಆರೋಗ್ಯ ಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ನಿಗಾ ವಹಿಸುತ್ತಿದೆ’ ಎಂದು ತಿಳಿಸಿದ್ದರು. ಇದೀಗಾ ವಿಧಿವಶರಾಗಿದ್ದಾರೆ.ಆದರೆ ಎಸ್ ಪಿ ಬಿ ಅವರಿಗೆ ಕೊವೀಡ್ ನೆಗೆಟಿವ್ ಆಗಿತ್ತು.