ಕಡಬ: ಬಿಜೆಪಿ ಸರಕಾರದ ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರೋಧಿಸಿ ಎಸ್ಡಿಪಿಐ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 25. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ತಾಲೂಕು ಸಮಿತಿ ವತಿಯಿಂದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಜಾರಿಗೊಳಿಸಿರುವ ರೈತ ವಿರೋಧಿ ಸುಗ್ರೀವಾಜ್ಞೆಯ ವಿರುದ್ದ ಕಡಬ ತಾಲೂಕು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯ ನೇತೃತ್ವವನ್ನು ಎಸ್ಡಿಪಿಐ ಕಡಬ ತಾಲೂಕು ಸಮಿತಿ ಅಧ್ಯಕ್ಷರಾದ ರಮ್ಲಾ ಸನ್‌ ರೈಸ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯರಾದ ಆನಂದ ಮಿತ್ತಬೈಲು ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಲಾಯಿತು. ಸರಕಾರವು ರೈತ ವಿರೋಧಿ ಮಸೂದೆಯನ್ನು ಹಿಂಪಡೆಯುವಂತೆ ಕಡಬ ತಾಲೂಕು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿಯನ್ನು ಸಲ್ಲಿಸಲಾಯಿತು.

Also Read  ಗೃಹಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ

ಈ ಸಂದರ್ಭದಲ್ಲಿ ಎಸ್ಡಿಪಿಐ ಸಮಿತಿ ಸದಸ್ಯರಾದ ಹಾರೀಶ್ ಕಳಾರ, ಅಬ್ದುಲ್ ನಬಿ ಶಾನ್ ಕಳಾರ ಉಪಸ್ಥಿತರಿದ್ದರು. ಕಡಬ ತಾಲೂಕು ಸಮಿತಿ ಸದಸ್ಯರಾದ ಕಮರುದ್ದೀನ್ ಅಲೆಕ್ಕಾಡಿ ಸ್ವಾಗತಿಸಿ, ಧನ್ಯವಾದಗೈದರು.

error: Content is protected !!
Scroll to Top