ಡ್ರಗ್ಸ್ ಪ್ರಕರಣ : ನಿರೂಪಕಿ ಅನುಶ್ರೀ ವಿಚಾರಣೆಗೆ ಹಾಜರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 26:  ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ನೋಟಿಸ್ ಪಡೆದಿರುವ ನಟಿ, ನಿರೂಪಕಿ ಅನುಶ್ರೀ ಶನಿವಾರ ಬೆಳಗ್ಗೆ ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

 

ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದರು. ಆದರೆ ಅನುಶ್ರೀ ಸೆ.25ರಂದೇ ಹಾಜರಾಗುವುದಾಗಿ ತಿಳಿಸಿದ್ದರು. ಅದರಂತೆ ಪೊಲೀಸರು ಅನುಶ್ರೀ ಶುಕ್ರವಾರ ವಿಚಾರಣೆಗೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದರು.ಆದರೆ ಸಂಜೆಯವರೆಗೂ ಅನುಶ್ರೀ ವಿಚಾರಣೆಗೆ ಹೋಗಿರಲಿಲ್ಲ. ಇಂದು ಬೆಳಗ್ಗೆಯೇ ಸಿಸಿಬಿ ಕಚೇರಿಗೆ ಆಗಮಿಸಿದ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದಾರೆ. ಅನುಶ್ರೀಯನ್ನು ಪಣಂಬೂರು ಎಸಿಪಿ ಬೆಳ್ಳಿಯಪ್ಪ ನೇತೃತ್ವ ಪಣಂಬೂರು ಸಿಸಿಬಿ ತಂಡ ವಿಚಾರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

Also Read  ಮ0ಗಳೂರು: ಸ್ವಚ್ಛ ಗೆಳತಿ ಜಾಗೃತಿ ಅಭಿಯಾನ ತರಬೇತಿ

 

 

 

error: Content is protected !!
Scroll to Top