ರೌಡಿಶೀಟರ್ ಕಿಶನ್ ಹತ್ಯೆ ಪ್ರಕರಣ ➤ ಐವರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಸೆ. 26:   ಹಿರಿಯಡ್ಕ ಪೇಟೆಯಲ್ಲಿ ಹಾಡುಹಾಗಲೇ ನಡೆದ ರೌಡಿಶೀಟರ್ ಕಿಶನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಪೊಲೀಸರು ಬಂದಿಸಿದ್ದಾರೆ. ಇನ್ನು ಇಂದು ಮಧ್ಯಾಹ್ನ ನ್ಯಾಯಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

 

ಹಿರಿಯಡ್ಕ ಪೇಟೆ ಶ್ರೀ ವೀರಭದ್ರ ದೇವಸ್ಥಾನದ ಸಮೀಪ ರೌಡಿಶೀಟರ್ ಕಿಶನ್ ಹೆಗ್ಡೆ ಯನ್ನು ಸುತ್ತಿಗೆ, ಮಾರಕಾಯುಧಗಳನ್ನು ಹಿಡಿದುಕೊಂಡು ಕಾರಿನ ಮುಂಭಾಗದಿಂದ ಆಗಮಿಸಿದ 4-5 ಮಂದಿಯ ತಂಡ ಏಕಾಏಕಿಯಾಗಿ ಕಾರಿನ ಗಾಜಿಗೆ ಸುತ್ತಿಗೆಯಿಂದ ಹೊಡೆದು ಜಖಂ ಗೊಳಿಸಿತ್ತು. ಅನಂತರ ಕಿಶನ್‌ ಹೆಗ್ಡೆ ಮೇಲೆ ಮನೋಜ್‌ ತಲವಾರಿನಿಂದ ಕಡಿದು ಗಾಯಗೊಳಿಸಿದ್ದ.

Also Read  ಬಂಟ್ವಾಳ: ಡಿ.28 ರಿಂದ ಫೆ.17 ರವರೆಗೆ ಸಾರ್ವಜನಿಕರಿಗಿಲ್ಲ ಪೊಳಲಿಯ ದೇವರ ದರ್ಶನ

 

ತಪ್ಪಿಸಿಕೊಳ್ಳಲು ಯತ್ನಿಸಿದ ಕಿಶನ್‌ನನ್ನು ಹಿಂಬಾಲಿಸಿದ ತಂಡ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿದ್ದರು.  ಈ ಪ್ರಕರಣದ ತನಿಖೆಗಾಗಿ 4 ತನಿಖಾ ತಂಡ ರಚನೆ ಮಾಡಲಾಗಿತ್ತು. ಸಧ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಕೊಲೆಯ ಬಳಿಕ ಆರೋಪಿಗಳು ರಿಡ್ಜ್ ಹಾಗೂ ಇನೋವಾ ಕಾರಿನಲ್ಲಿ ತೆರಳಿದ್ದರು. ರಿಡ್ಜ್ ಕಾರು ಕಣಂಜಾರು ಬಳಿಯ ಬ್ರಹ್ಮಲಿಂಗೇಶ್ವರ ಮೇಲಂಟೆ ದೇವಸ್ಥಾನದ ಬಳಿ ಪತ್ತೆ ಯಾಗಿತ್ತು. ಇನೋವಾ ಕಾರು ಶುಕ್ರವಾರ ಕಾರ್ಕಳ ಸಮೀಪದ ಇರ್ವತ್ತೂರುವಿನಲ್ಲಿ ಪತ್ತೆಯಾಗಿತ್ತು.

 

error: Content is protected !!
Scroll to Top