ಮಂಗಳೂರು : ಅಡುಗೆ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿ..!!

(ನ್ಯೂಸ್ ಕಡಬ) newskadaba.com ಕಾರವಾರ, ಸೆ. 26:  ಅಡುಗೆ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಕುಮಟಾ ತಾಲೂಕಿನ ಹಂದಿಗೋಣ ಬಳಿ ಇಂದು ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹುಬ್ಬಳ್ಲಿಗೆ ತೆರಳುತ್ತಿದ್ದಾಗ ಶನಿವಾರ ಭೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮದ್ಯದಲ್ಲೇ ಟ್ಯಾಂಕರ್ ಪಲ್ಟಿಯಾಗಿದೆ.

 

ಪಲ್ಟಿಯಾದ ರಭಸಕ್ಕೆ ಟ್ಯಾಂಕರ್ ನಿಂದ ಸಣ್ಣ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆ ಆಗುತ್ತಿದೆ ಎನ್ನಲಾಗಿದೆ. ಸುತ್ತಮುತ್ತಲಿನ ಜನರ ಆತಂಕಕ್ಕೆ ಕಾರಣವಾಗಿದೆ.  ಇದರಿಂದ ಆಸುಪಾಸಿನ ಮನೆಯವರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ಒಲೆ ದೀಪ ಹಚ್ಚದಂತೆ ಸೂಚಿಸಲಾಗಿದೆ. ಗ್ಯಾಸ್ ಟ್ಯಾಂಕರ್ ಬಿದ್ದ ಪರಿಣಾಮ ಕುಮಟಾ – ಹೊನ್ನಾವರ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಅನಿಲ ಸೋರಿಕೆ ನಿಯಂತ್ರಿಸಿ ಟ್ಯಾಂಕರ್ ಅನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸುತ್ತಿದ್ದರು.

Also Read  ವಿಕೃತ ಮನಸ್ಸಿನ ಪುಸ್ತಕ ಮಾರಾಟಗಾರ ➤ 10ರ ಬಾಲೆ ಮೇಲೆ ಬಿತ್ತು ಆತನ ಕಣ್ಣು ..!

 

 

 

error: Content is protected !!
Scroll to Top