ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ:, ಸೆ. 27: ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಅವರು ಇಂದು ಬೆಳಿಗ್ಗೆ ದೆಹಲಿಯಲ್ಲಿ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.

 

ವಾಜಪೇಯಿ ಯವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು.ರಾಜಸ್ಥಾನ ಮೂಲದ ಜಸ್ವಂತ್ ಸಿಂಗ್ ಅವರು ಭಾರತದ ವಿದೇಶಾಂಗ ಸಚಿವರು, ರಕ್ಷಣಾ ಸಚಿವರು ಮತ್ತು ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು 1950 ಮತ್ತು 60 ರ ದಶಕಗಳಲ್ಲಿ ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿದ್ದರು, ಆದರೆ ನಂತರ ಅವರು ರಾಜಕೀಯ ವೃತ್ತಿಯನ್ನು ಮುಂದುವರಿಸಲು ರಾಜೀನಾಮೆ ನೀಡಿದರು.ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

Also Read  ಕಡಬ: ರೈಲು ಢಿಕ್ಕಿಯಾಗಿ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ.! ➤ ಸೋಮವಾರದಂದು ಆತನ ಬದುಕಿನಲ್ಲಿ ನಡೆದಿದ್ದಾರೂ ಏನು..?

 

 

error: Content is protected !!
Scroll to Top