ಭೀಕರ ಅಪಘಾತ ➤ ಗರ್ಭಿಣಿ ಸೇರಿ 7 ಮಂದಿ ದುರ್ಮರಣ..!!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 27:  ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಸಾವಳಗಿ ಬಳಿ ಸಂಭವಿಸಿದೆ.

 

ಕಲಬುರಗಿ ತಾಲೂಕಿನ ಸಾವಳಗಿ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ ಮೃತರಲ್ಲಿ ನಾಲ್ವರು ಮಹಿಳೆಯರು ಮೂವರು ಪುರುಷರೂ ಸೇರಿದ್ದಾರೆ. ಕಲಬುರಗಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರೆಲ್ಲರೂ ಕಲಬುರಗಿಯ ಜಿಲ್ಲೆಯ ಆಳಂದದವರು ಎಂದು ಗುರುತಿಸಲಾಗಿದೆ. ಗರ್ಭಿಣಿ ಇರ್ಫಾನಾ ಬೇಗಂ (25), ರುಬಿಯಾ ಬೇಗಂ (50), ಅಬೇದಾಬಿ ಬೇಗಂ (50), ಜಯಚುನಬಿ (60) ಹಾಗೂ ಮುನೀರ್ (28), ಮಹಮ್ಮದ್ ಅಲಿ (38), ಶೌಕತ್ ಅಲಿ (29) ಎಂಬುವವರೇ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕಲಬುರಗಿ ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕಡಬದ ಸಸ್ಯಾಹಾರಿ ಮತ್ತು ಮಾಂಸಹಾರಿ ಹೊಟೇಲ್ ಬಿರಿಯಾನಿ ಹೌಸ್ ಪುನರಾರಂಭ ➤ಲಾಕ್ಡೌನ್ ಹಿನ್ನೆಲೆ ಲಾಕ್ ಆಗಿದ್ದ ಹೊಟೇಲ್

 

 

error: Content is protected !!
Scroll to Top