ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿಗೆ ಕೊವಿಡ್ -19 ದೃಢ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 27:  ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಅವರಿಗೆ ಕೊವಿಡ್ 19ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತಂತೆ ಉಮಾಭಾರತಿ ಅವರು ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ಮೂಲಕ ತಡರಾತ್ರಿ ತಿಳಿಸಿದ್ದಾರೆ.

 

 

ಉಮಾಭಾರತಿ ಅವರಿಗೆ ಸ್ವಲ್ಪ ಮಟ್ಟಿನ ಜ್ವರ ಕಾಣಿಸಿಕೊಂಡಿದೆ. ಕಳೆದ ಮೂರು ದಿನಗಳಿಂದ ಜ್ವರಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕೊವಿಡ್ ವಿರುದ್ಧ ಸುರಕ್ಷಿತಾ ಕ್ರಮಗಳನ್ನು ಅನುಸರಿಸುತ್ತಾ ಬಂದಿದ್ದರು. ಶನಿವಾರದಂದು ಕೊವಿಡ್ 19 ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಪಾಸಿಟಿವ್ ಎಂದು ವರದಿ ಬಂದಿದೆ.ಈ ಬಗ್ಗೆ ಟ್ವೀಟ್ ಮಾಡಿ, ”ನಾನು ವಂದೇ ಮಾತರಂ ಕುಂಜ್ ನಲ್ಲಿ ಕ್ವಾರಂಟೈನ್ ನಲ್ಲಿದ್ದೇನೆ. ಹರಿದ್ವಾರ ಹಾಗೂ ಋಷಿಕೇಶದ ನಡುವೆ ಇರುವ ತಾಣ ಇದಾಗಿದೆ. ಇನ್ನು ನಾಲ್ಕು ದಿನಗಳ ನಂತರ ಮತ್ತೊಮ್ಮೆ ಕೊವಿಡ್ 19 ಪರೀಕ್ಷೆಗೆ ಒಳಪಡುತ್ತೇನೆ. ಪರಿಸ್ಥಿತಿ ಹೀಗೆ ಮುಂದುವರೆದರೆ ವೈದ್ಯರ ಸಲಹೆಯಂತೆ ಮುಂದುವರೆಯುತ್ತೇನೆ” ಎಂಬರ್ಥದಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.

Also Read  ಒಆರ್‌ಒಪಿ ಬಾಕಿ ಪಾವತಿಸಲು ಕೇಂದ್ರಕ್ಕೆ ಮಾರ್ಚ್ 15 ರವರೆಗೆ ಸಮಯ ನೀಡಿದ ಸುಪ್ರೀಂ ಕೋರ್ಟ್

 

error: Content is protected !!
Scroll to Top