ಲಕ್ನೋ : ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಕಾಮುಕರ ಅಟ್ಟಹಾಸ.!!

(ನ್ಯೂಸ್ ಕಡಬ) newskadaba.com ಲಕ್ನೋ, ಸೆ. 27:  ಚಲಿಸುತ್ತಿದ್ದ ಬಸ್ ನಲ್ಲಿಯೇ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪಾಪಿಗಳು, ಬಸ್ ನಿಂದ ಮಹಿಳೆಯನ್ನು ಎಸೆದ ಅಮಾನವೀಯ ಘಟನೆ ನಡೆದಿದೆ. ಈ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಅತ್ಯಾಚಾರ ಎಸಗಿದ ನಂತರ ಕಾಮುಕರನ್ನು ಮಹಿಳೆಯನ್ನು ರಸ್ತೆಯಲ್ಲಿಯೇ ಎಸೆದು ಪರಾರಿಯಾಗಿದ್ದಾರೆ. ಸದ್ಯ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದಾರೆ.

 

 

 

ಮಹಿಳೆಗೆ ತಂಪು ಪಾನೀಯದಲ್ಲಿ ನಶೆಯ ಪದಾರ್ಥ ಸೇರಿಸಿ, ನಂತರ ಅದನ್ನು ಕುಡಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ನಂತರ ಬಸ್ ಕಂಡಕ್ಟರ್ ಮತ್ತು ಚಾಲಕ ಸಂತ್ರಸ್ತೆಯನ್ನು ನಡುರಸ್ತೆಯಲ್ಲಿಯೇ ಪರಾರಿಯಾಗಿದ್ದಾರೆ.ಸದ್ಯ ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ ಕುಟುಂಬಸ್ಥರ ಬಗ್ಗೆ ಕೆಲ ಮಾಹಿತಿ ನೀಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Also Read  ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ಮ್ಯಾಥ್ಯೂ ವೇಡ್ ನಿವೃತ್ತಿ ಘೋಷಣೆ

 

error: Content is protected !!
Scroll to Top