ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 28:  ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡದಲ್ಲಿ ನೀರಸ ಪ್ರತಿಕ್ರಿಯೆ ದೊರೆತಿದ್ದು, ಎಂದಿನಂತೆ ಖಾಸಗಿ ಬಸ್‌ಗಳು ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳು, ಆಟೋಗಳು ರಸ್ತೆಗಿಳಿದಿವೆ. ಬಂದರು ಪ್ರದೇಶದಲ್ಲಿ ವ್ಯಾಪಾರ-ವಹಿವಾಟುಗಳು ಆರಂಭವಾಗಿವೆ.

 

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ನಗರದಾದ್ಯಂತ 300 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.ಬಲವಂತವಾಗಿ ಬಂದ್ ನಡೆಸಲು ಮುಂದಾದವರಿಗೆ ಮತ್ತು ಕೋವಿಡ್ 19 ನಿಯಮಾವಳಿ ಉಲ್ಲಂಘಿಸಿದವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Also Read  ಅಪ್ರಾಪ್ತೆಯ ಮೇಲೆ ಅತ್ಯಾಚಾರವೇಸಗಿ ಶ್ವಾಸಕೋಶ ಕೊಂಡೊಯ್ದ ದುರುಳರು

 

 

error: Content is protected !!
Scroll to Top