ಕಾರ್ಕಳ : ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ.!!

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 28:  ಕಾರ್ಕಳ ತಾಲ್ಲೂಕಿನ ಚಿಕ್ಕಲಬೆಟ್ಟು ಗ್ರಾಮದಲ್ಲಿ ಭಾನುವಾರ ಉದ್ಯಮಿ ಸುನೀಲ್‌ ಶೆಟ್ಟಿ (45) ಎಂಬುವರು ನಾಡ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುಣೆಯಲ್ಲಿ ಹೋಟೆಲ್‌ ಉದ್ಯಮ ನಡೆಸುತ್ತಿದ್ದ ಸುನೀಲ್ ಶೆಟ್ಟಿ ಲಾಕ್‌ಡೌನ್ ಬಳಿಕ ವ್ಯವಹಾರದಲ್ಲಿ ತೀವ್ರ ನಷ್ಟ ಅನುಭವಿಸಿದ್ದರು. ಸಾಲದ ಹೊರೆ ಕೂಡ ಹೆಚ್ಚಾಗಿತ್ತು. ಆರ್ಥಿಕ ಸಂಕಷ್ಟದಿಂದ ಮನನೊಂದು ಮನೆಯ ಸಮೀಪದ ಗದ್ದೆಯಲ್ಲಿ ಗುಂಡು ಹಾರಿಸಿಕೊಂಡಿದ್ದಾರೆ . ಸೋಮವಾರ ಪುಣೆಗೆ ತೆರಳುವುದಾಗಿ ಮನೆಯವರಿಗೆ ತಿಳಿಸಿದ್ದ ಸುನೀಲ್ ಶೆಟ್ಟಿ ಅಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

Also Read  ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ ಸೀರೆಗಳನ್ನು ಜಪ್ತಿ ಮಾಡಿದ GST ಅಧಿಕಾರಿಗಳು

 

error: Content is protected !!
Scroll to Top