ಡ್ರಗ್ಸ್ ನಂಟಿನ ಆರೋಪ ➤ ನಶೆ ನಟಿಮಣಿಯರಿಗೆ ಜೈಲೇ ಗತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 29 :ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಎನ್‍ ಡಿಪಿಎಸ್ ವಿಶೇಷ ನ್ಯಾಯಾಲಯವು ನಟಿಯರಾದ ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳಿಸಿದೆ.

ಹೀಗಾಗಿ ನಟಿಯರಿಬ್ಬರಿಗೂ ಮತ್ತಷ್ಟು ದಿನ ಜೈಲೇ ಗತಿಯಾಗಿದೆ. ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಎಂ ಸೀನಪ್ಪ ಅವರು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ರಾಗಿಣಿ ಮತ್ತು ಸಂಜನಾ ಹೈಕೋರ್ಟ್ ಮೊರೆಹೋಗುವ ನಿರೀಕ್ಷೆಯಿದೆ. ಮುಂದಿನ ಎರಡು ದಿನಗಳಲ್ಲಿ ನಟಿಯರ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

Also Read  ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ವಾಹನ    ➤ ಆರು ಮಂದಿಗೆ ಗಾಯ

\

 

error: Content is protected !!
Scroll to Top