ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ ಯುವತಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 29 :ಎರಡು ವಾರಗಳ ಹಿಂದೆ ಉತ್ತರ ಪ್ರದೇಶದ ಹಾಥ್ರಸ್ ಜಿಲ್ಲೆಯಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಗ್ಯಾಂಗ್ ರೇಪ್ ಆಗಿದ್ದ 19 ವರ್ಷದ ದಲಿತ ಯುವತಿ ಇಂದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಹಲವು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ಈ ಯುವತಿ ಇಂದು ಬೆಳಗ್ಗೆ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು. ದೇಹದ ಹಲವು ಕಡೆಗಳಲ್ಲಿ ಗಾಯ, ನಾಲಗೆ ಕತ್ತರಿಸಿ ಹೋಗಿತ್ತು. ಪ್ರಸ್ತುತ ಎಲ್ಲಾ ನಾಲ್ವರು ಆರೋಪಿಗಳು ಜೈಲಿನಲ್ಲಿದ್ದಾರೆ. ದೆಹಲಿಯಿಂದ 200 ಕಿಲೋ ಮೀಟರ್ ದೂರದಲ್ಲಿ ಹತ್ರಾಸ್ ಎಂಬ ಗ್ರಾಮದಲ್ಲಿ ಕಳೆದ ಸೆಪ್ಟೆಂಬರ್ 14ರಂದು ಮಹಿಳೆ ಮೇಲೆ ಅತ್ಯಾಚಾರ ನಡೆದಿತ್ತು. ಗದ್ದೆಯೊಂದರಲ್ಲಿ ಮಹಿಳೆ ತನ್ನ ಕುಟುಂಬದವರ ಜೊತೆ ಹುಲ್ಲು ಕೀಳುತ್ತಿದ್ದ ವೇಳೆ ಆಕೆಯನ್ನು ದುಪ್ಪಟ್ಟಾ ಹಿಡಿದು ಎಳೆದುಕೊಂಡು ಹೋಗಿ ನಾಲ್ವರು ಪುರುಷರು ಅತ್ಯಾಚಾರವೆಸಗಿದ್ದರು.

Also Read  'ಮೋದಿ' ಅಂತ ಹೆಸರಿದ್ದವರೆಲ್ಲ ಕಳ್ಳರೇ.!      ➤ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೊಸ ವಿವಾದ.!                        

 

 

 

error: Content is protected !!
Scroll to Top