ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ನಿರ್ಧಾರ‌ವಾಗಿಲ್ಲ ➤ ಶಿಕ್ಷಣ ಸಚಿವರಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.29: ರಾಜ್ಯದಲ್ಲಿ ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ಇದುವರೆಗೆ ಯಾವುದೇ ನಿರ್ಧಾರವಾಗಿಲ್ಲ. ಯಾವುದೇ ದಿನಾಂಕ ಇದುವರೆಗೆ ಅಂತಿಮವಾಗಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಶಾಲಾ ಕಾಲೇಜು ಮರು ಪ್ರಾರಂಭ ಮಾಡುವ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು, ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ.

Also Read  ವಿಚಾರಣಾಧೀನ ಕೈದಿ ಜೈಲಿನಲ್ಲಿ ಆತ್ಮಹತ್ಯೆ

error: Content is protected !!
Scroll to Top