(ನ್ಯೂಸ್ ಕಡಬ) newskadaba.com ಲಕ್ನೋ, ಸೆ. 29. ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನಾಳೆ ಪ್ರಕಟಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಲಕ್ನೋದಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ.
ಸೆ. 30 ರಂದು ಸಿಬಿಐ ಕೋರ್ಟ್ ಈ ಪ್ರಕರಣದ ಕುರಿತು ತೀರ್ಪು ನೀಡಲಿದ್ದು, ಎಲ್ಲಾ ಆರೋಪಿಗಳು ಖುದ್ದಾಗಿ ಕೋರ್ಟ್ ಗೆ ಹಾಜರಾಗಬೇಕೆಂದು ಸಿಬಿಐ ವಿಶೇಷ ನ್ಯಾಯಮೂರ್ತಿ ಎಸ್.ಕೆ. ಯಾದವ್ ಅವರು ಈಗಾಗಲೇ ನಿರ್ದೇಶನ ನೀಡಿದೆ. ಬಾಬರಿ ಮಸೀದಿಯ ಧ್ವಂಸ ಪ್ರಕರಣದಲ್ಲಿ ಒಟ್ಟು 49 ಜನರು ಆರೋಪಿಗಳಿದ್ದು, ಅದರಲ್ಲಿ 17 ಜನ ಈಗಾಗಲೇ ಮೃತಪಟ್ಟಿದ್ದಾರೆ. ಈ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಉಮಾಭಾರತಿ ಮತ್ತು ಕಲ್ಯಾಣ್ ಸಿಂಗ್ ಸೇರಿದಂತೆ 32 ಜನ ಆರೋಪಿಗಳಾಗಿದ್ದಾರೆ ಎನ್ನಲಾಗಿದೆ.