ಎಸ್​ಪಿ ಬಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ ➤ ಪ್ರಧಾನಿಗೆ ಪತ್ರ ಬರೆದ ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ

(ನ್ಯೂಸ್ ಕಡಬ) newskadaba.com ಆಂಧ್ರ, ಸೆ. 29: ಗಾನ ಗಂಧರ್ವ ಎಸ್​ಪಿ ಬಾಲಸುಬ್ರಹ್ಮಣ್ಯಂ ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಮನಗಂಡು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೋರಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್​ ಜಗನ್​ ಮೋಹನ್​ ರೆಡ್ಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

 

ಕಳೆದ ಮೂರುದಿನಗಳ ಹಿಂದೆ ಇಹಲೋಕ ತ್ಯಜಿಸಿದ ಎಸ್​ಪಿ ಬಾಲಸುಬ್ರಹ್ಮಣ್ಯಂ, ಸಂಗೀತ ಕ್ಷೇತ್ರದಲ್ಲಿ ದಾಖಲೆಗಳನ್ನು ಬರೆದವರು.5 ದಶಕಗಳ ಕಾಲ 40,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ತಮ್ಮ ಅಮೋಘದ ಕಂಠದ ಮೂಲಕ ದೇಶದ ಜನರನ್ನು ರಂಜಿಸಿದ್ದಾರೆ. ಪ್ರಪಂಚದಾದ್ಯಂತ ಸಂಗೀತ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಸನ್ಮಾನ ನೀಡಬೇಕು ಎಂದು ಕೋರಿ ಪತ್ರ ಬರೆದಿದ್ದಾರೆ.

Also Read  ಏಕರೂಪ ನಾಗರಿಕ ಸಂಹಿತೆಗೆ ಅಂತಿಮ ಮುದ್ರೆ

 

 

error: Content is protected !!
Scroll to Top