ಬಾಬರಿ ಮಸೀದಿ ಧ್ವಂಸ ಪ್ರಕರಣ ➤ ಇಂದು ತೀರ್ಪು ಪ್ರಕಟ

 (ನ್ಯೂಸ್ ಕಡಬ) newskadaba.com ಲಕ್ನೊ, ಸೆ. 30. ಸಿಬಿಐ ವಿಶೇಷ ನ್ಯಾಯಾಲಯವು ಇಂದು ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟಿಸಲಿದೆ. ವಿಶೇಷ ನ್ಯಾಯಾಲಯದ ಸುತ್ತಲೂ ಪೊಲೀಸ್‌ ಬಿಗಿ ಭದ್ರತೆ ಒದಗಿಸಲಾಗಿದೆ.ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಕಲ್ಯಾಣ್‌ ಸಿಂಗ್‌ ಮತ್ತಿತರರು ಆರೋಪಿಗಳಾಗಿದ್ದಾರೆ.

ತೀರ್ಪು ಪ್ರಕಟವಾಗುವ ದಿನದಂದು ಎಲ್ಲ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಕೆ. ಯಾದವ್‌ ಸೆ.16ರಂದು ನಿರ್ದೇಶಿಸಿದ್ದರು. ವಿಶೇಷ ನ್ಯಾಯಾಲಯದ ಮುಂದೆ 351 ಸಾಕ್ಷಿಗಳನ್ನು ಹಾಗೂ 600 ದಾಖಲೆಗಳನ್ನು ಸಿಬಿಐ ಸಲ್ಲಿಸಿದ್ದು, 48 ಜನರ ವಿರುದ್ಧ ಆರೋಪಪಟ್ಟಿ ದಾಖಲಿಸಲಾಗಿತ್ತು.

ವಿಚಾರಣೆಯ ಸುದೀರ್ಘ ಅವಧಿಯಲ್ಲಿ ಆರೋಪಿಗಳ ಪೈಕಿ 17 ಜನರು ಮೃತಪಟ್ಟಿದ್ದಾರೆ.ಬಿಜೆಪಿಯ ಹಿರಿಯ ನಾಯಕರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ ‘ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಪಿತೂರಿ ನಡೆಸಿ ‘ಕರಸೇವಕ’ರಿಗೆ ಪ್ರಚೋದಿಸಿದ್ದರು’ ಎಂದು ಸಿಬಿಐ ವಾದ ಮಂಡಿಸಿತ್ತು. ಈ ಆರೋಪವನ್ನು ತಳ್ಳಿ ಹಾಕಿದ್ದ ಆರೋಪಿಗಳು, ತಮ್ಮ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಗಳಿಲ್ಲ.

Also Read  ಮೃತ ಮೀನುಗಾರ ಭಾಗ್ಯರಾಜ್ ಮನೆಗೆ ಸಚಿವ ಕೋಟ ಭೇಟಿ ➤ ಸಂಕಷ್ಟ ಪರಿಹಾರ ನಿಧಿಯಿಂದ ರೂ 2 ಲಕ್ಷ ವಿತರಣೆ

ತಮ್ಮ ವಿರುದ್ಧದ ದೋಷಾರೋಪಣೆ ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಸರ್ಕಾರದ ರಾಜಕೀಯ ಒಳಸಂಚು ಎಂದು ಪ್ರತಿವಾದ ಮಂಡಿಸಿದ್ದರು.ಅಯೋಧ್ಯೆಯಲ್ಲಿ ರಾಮ ಮಂದಿರವಿದ್ದ ನಿವೇಶನದಲ್ಲಿ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿದ್ದ ‘ಕರಸೇವಕರು’ 1992ರ ಡಿಸೆಂಬರ್‌ 6ರಂದು, ಮಸೀದಿಯನ್ನು ಧ್ವಂಸ ಮಾಡಿದ್ದರು. ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಇಂದು ನ್ಯಾಯಾಲಯ ಮುಂದೆ ಹಾಜರಾಗುವುದಿಲ್ಲ ಎಂದು ತಿಳಿದುಬಂದಿದೆ. ಇವೆಲ್ಲವೂದರ ಸಾಕ್ಷ್ಯ ಆಧಾರಗಳನ್ನು ಗಮನದಲ್ಲಿಟ್ಟು ಕೊಂಡು . ಆಗಿರು ಬೆಳವಣಿಗೆಯನ್ನು ಇಂದು ಕೋರ್ಟ್ ತೀರ್ಪು ನೀಡುವ ಮೂಲಕ ಉತ್ತರಿಸಲಿದೆ.

Also Read  ಗೂಗಲ್ ಕಚೇರಿಗೆ ಹುಸಿ ಬಾಂಬ್ ಕರೆ!

 

 

error: Content is protected !!
Scroll to Top