(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 30. ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಸ್ ಕೆ ಯಾದವ್ ಅವರು ಇಂದು (ಸೆ. 30) ಪ್ರಕಟಿಸಿದ್ದು, ಪ್ರಮುಖ ಆರೋಪಿಗಳಾದ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾಭಾರತಿ ಸೇರಿದಂತೆ ಎಲ್ಲಾ ಆರೋಪಿಗಳು ನಿರ್ದೋಷಿಗಳು ಎಂದು ತಿಳಿಸಿದೆ.
ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವನಿಯೋಜಿತ ಕೃತ್ಯ ಅಲ್ಲ. ಇದು ಆಕಸ್ಮಿಕವಾಗಿ ನಡೆದದ್ದು ಎಂದು ಲಖ್ನೋ ವಿಶೇಷ ನ್ಯಾಯಾಲಯದ ಜಡ್ಜ್ ಎಸ್.ಕೆ.ಯಾದವ್ ತೀರ್ಪಿನಲ್ಲಿ ತಿಳಿಸಿದ್ದಾರೆ. ಲಖ್ನೋ ಸಿಬಿಐ ವಿಶೇಷ ನ್ಯಾಯಾಲಯ ಸುದೀರ್ಘ 28 ವರ್ಷಗಳ ಕಾಲ ವಿಚಾರಣೆ ನಡೆಸಿ ಅಂತಿಮ ತೀರ್ಪನ್ನು ಪ್ರಕಟಿಸಿದೆ.