ಸ್ಕೂಟರ್‌ಗೆ ಲಾರಿ ಡಿಕ್ಕಿ ➤ ದ್ವಿಚಕ್ರ ಸವಾರ ಗಂಭೀರ..!!

(ನ್ಯೂಸ್ ಕಡಬ) newskadaba.com ಸುರತ್ಕಲ್, ಸೆ.30: ಹಿಂಬದಿಯಿಂದ ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಎದುರಿದ್ದ ಖಾಸಗಿ ಬಸ್‌ಗೆ ಸ್ಕೂಟರ್‌ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್‌ನ ಮಿಸ್ಕಿತ್ ಆಸ್ಪತ್ರೆಯ ಬಳಿ ನಡೆದಿದೆ.

 

 

ಗಂಭೀರ ಗಾಯಗೊಂಡ ದ್ವಿಚಕ್ರ ಸವಾರನನ್ನು ಸುಧಾಕರ್‌ (28) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸುರತ್ಕಲ್‌ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

 

Scroll to Top