ಪುತ್ತೂರು: ಹರಳಿಂಡಿ ಸಾಗಾಟದ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 01. ಹರಳಿಂಡಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರು- ವಿಟ್ಲ ರಸ್ತೆಯ ಪೆಲತ್ತಿಂಜ ಎಂಬಲ್ಲಿ ನಡೆದಿದೆ.

ಪುತ್ತೂರಿನಿಂದ ವಿಟ್ಲ ಕಡೆಗೆ ಲಾರಿಯಲ್ಲಿ ಹರಳಿಂಡಿ ಸಾಗಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಲಾರಿಯಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top