ಬಂಟ್ವಾಳದಲ್ಲಿ ಅಪ್ರಾಪ್ತನ ಕಿರುಕುಳಕ್ಕೆ ಬೇಸತ್ತ ಯುವತಿಯರು ➤ ಅಷ್ಟಕ್ಕೂ ಆತ ಮಾಡಿದ್ದೇನು ಗೊತ್ತೇ.!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 01. ದಾರಿಯಲ್ಲಿ ನಡೆದುಕೊಂಡು ಹೋಗುವ ಬಾಲಕಿಯರಿಗೆ ಹಾಗೂ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಅಪ್ರಾಪ್ತ ಬಾಲಕನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಾಲಕಿಯರಿಗೆ ಹಾಗೂ ಯುವತಿಯರಿಗೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯವೆಸಗಿದ ಆರೋಪದಡಿಯಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಅಪ್ರಾಪ್ತ ಬಾಲಕ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಿಸಿ ಬಾಲಕನ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ .ಠಾಣಾ ಎಸ್ ಐ ಪ್ರಸನ್ನ ನೇತೃತ್ವದ ತಂಡ ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆ ಹಾಕಿದಾಗ ಅಪ್ರಾಪ್ತ ಬಾಲಕನ ಬಗ್ಗೆ ಸುಳಿವು ಸಿಕ್ಕಿದೆ.

Also Read  ಜೀವರಕ್ಷಕತ್ವ ಕಳೆದುಕೊಳ್ಳುತ್ತಿರುವ ಆಂಟಿಬಯೋಟಿಕ್‍ಗಳು

 

 

ಅದರಂತೆ ಬಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ತಪ್ಪು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ . ಕಳೆದ ಕೆಲವು ತಿಂಗಳಿನಿಂದ ಕುಂಪಣಮಜಲು ಪರಿಸರದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಯುವತಿಯರಿಗೆ ಈತ ಕಿರುಕುಳ ನೀಡುತ್ತಿದ್ದ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರು ಕೇಳಿ ಬಂದಿತ್ತು.

 

 

error: Content is protected !!
Scroll to Top