ಸ್ಕೂಟಿ ಸ್ಕಿಡ್ – ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 01. ಸವಾರನ ನಿಯಂತ್ರಣ ಕಳೆದುಕೊಂಡು ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಪುತ್ತೂರು ತಾಲೂಕಿನ ಹೊರವಲಯದ ಈಶ್ವರಮಂಗಲ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಮೋಹಿತ್ ಗೌಡ (19 ವ ) ಎಂದು ಗುರುತಿಸಲಾಗಿದೆ. ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೇನಾಲದಿಂದ ಈಶ್ವರಮಂಗಿಲವನ್ನು ಸಂಪರ್ಕಿಸುವ ರಸ್ತೆಯಲ್ಲಿ ಮೋಹಿತ್ ಚಲಾಯಿಸುತ್ತಿದ್ದ ಡಿಯೋ ಸ್ಕಿಡ್ ಆಗಿ ಉರುಳಿ ಬಿದ್ದಿದ್ದು, ತಲೆ ರಸ್ತೆಗೆ ಅಪ್ಪಳಿಸಿದ ಕಾರಣ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವು ಸಂಭವಿಸಿದೆ ಎಂದು ತಿಳಿದು ಬಂದಿದೆ.

Also Read  ಕೇರಳದಲ್ಲಿ ನಕ್ಸಲ್‌ ಚಟುವಟಿಕೆ ➤ ಕೊಡಗಿನಲ್ಲಿ ಹೈಅಲರ್ಟ್

error: Content is protected !!
Scroll to Top