(ನ್ಯೂಸ್ ಕಡಬ) newskadaba.com ಮಂಗಳೂರು, ಅ.02: ದಕ್ಷಿಣ ಕನ್ನಡ ಜಿಲ್ಲಾಡಳಿತವು ಅಕ್ಟೋಬರ್ 2 ರ ಇಂದು ಮಹಾತ್ಮ ಗಾಂಧಿ ಉದ್ಯಾನದಲ್ಲಿ 151 ನೇ ಗಾಂಧಿ ಜಯಂತಿ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಇತರ ಗಣ್ಯರು ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೋಟಾ ಅವರು, “ಇಂದು ನಾವು ಮಹಾತ್ಮ ಗಾಂಧೀಜಿಯವರ 151 ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು ಮತ್ತು ಅಹಿಂಸೆಯ ನಂಬಿಕೆಯುಳ್ಳವರಾಗಿದ್ದರು. ಶಾಂತಿ, ಸಾಮರಸ್ಯ ಮತ್ತು ನಂಬಿಕೆಯ ಮೂಲಕ ಜನರನ್ನು ಒಗ್ಗೂಡಿಸಿದ್ದಕ್ಕಾಗಿ ಇಂದು ಎಲ್ಲರೂ ಮಹಾತ್ಮ ಗಾಂಧೀಜಿಯನ್ನು ಸ್ಮರಿಸುತ್ತಾರೆ. ಗಾಂಧೀಜಿಯ ಸ್ವಚ್ಛ ಭಾರತದ ಪರಿಕಲ್ಪನೆಯಂತೆ ಪ್ರಧಾನಿ ನರೇಂದ್ರ ಮೋದಿಯವರು 2014 ರ ಅಕ್ಟೋಬರ್ 2 ರಂದು ಸ್ವಚ್ಛ ಭಾರತ ದಿನವಾಗಿ ಘೋಷಿಸಿದ್ದರು” ಎಂದು ಹೇಳಿದ್ದಾರೆ. ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಬಶೀರ್ ಬೈಕಂಪಾಡಿ ಸ್ವಾಗತಿಸಿದರು. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ ವಿ, ಮೇಯರ್ ದಿವಾಕರ್, ಸಹಾಯಕ ಆಯುಕ್ತ ಮದನ್ ಮೋಹನ್, ಉಪ ಮೇಯರ್ ವೇದಾವತಿ, ಎಂಸಿಸಿ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಪಂಚಾಯತ್ ಸಿಇಒ ಡಾ. ಸೆಲ್ವಮಣಿ ಉಪಸ್ಥಿತರಿದ್ದರು.