(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಅ. 03. ದೇಶಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ರಾಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಕ್ರಾಂತ್ ವೀರ್ ಸೇರಿದಂತೆ ನಾಲ್ವರು ಪೊಲೀಸರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ.
ಹತ್ರಾಸ್ ಜಿಲ್ಲೆಯ ಹಳ್ಳಿಯಲ್ಲಿ 19 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ತನಿಖೆ ನಡೆಸುತ್ತಿರುವ ಹತ್ರಾಸ್ ಎಸ್‌ಪಿ ವಿಕ್ರಾಂತ್ ವೀರ್, ಸಿಒ ರಾಮ್ ಶಾಬ್, ಇನ್ಸ್‌ಪೆಕ್ಟರ್ ದಿನೇಶ್ ಮೀನಾ, ಎಸ್‌ಐ ಜಗವೀರ್ ಸಿಂಗ್ ಮತ್ತು ಮುಖ್ಯ ಪೇದೆ ಅವರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ಎಸ್‌ಪಿ ಅವರ ಆ ಜವಾಬ್ದಾರಿಯನ್ನು ಶಾಮ್ಲಿ ವಿನೀತ್ ಜೈಸ್ವಾಲ್ ಶೀಘ್ರದಲ್ಲೇ ವಹಿಸಿಕೊಳ್ಳಲಿದ್ದಾರೆ.ದೆಹಲಿ ಸೇರಿದಂತೆ ದೇಶದಾದ್ಯಂತ ಸಂತ್ರಸ್ತೆಗೆ ನ್ಯಾಯಕ್ಕಾಗಿ ವಿವಿಧ ಪಕ್ಷಗಳು ಹಾಗೂ ಸಂಘಟನೆಗಳ ಸದಸ್ಯರು ಶುಕ್ರವಾರ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.