ಕಾಸರಗೋಡು: ಇಂದಿನಿಂದ ಅ.9 ರ ವರೆಗೆ ನಿಷೇಧಾಜ್ಞೆ ಜಾರಿ ➤ ಡಾ.ಡಿ ಸಜಿತ್‌ ಬಾಬು ಆದೇಶ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.03: ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಕ್ಟೋಬರ್‌ 2 ರಾತ್ರಿ 12 ಗಂಟೆಯಿಂದ ಅ.9 ರಂದು ರಾತ್ರಿ 12 ಗಂಟೆಯವರೆಗೆ 1973 ರ ಕ್ರಿಮಿನಲ್‌ ಕಾಯಿದೆ 144 ಪ್ರಕಾರದ ನಿಷೇಧಾಜ್ಞೆ ಜಾರಿಗೊಳಿಸಿ ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ ಸಜಿತ್‌ ಬಾಬು ಆದೇಶ ಹೊರಡಿಸಿದ್ದಾರೆ.

 

 

ಕಾಸರಗೋಡು, ಬೇಕಲ, ಬದಿಯಡ್ಕ, ಕುಂಬಳೆ, ಮಂಜೇಶ್ವರ ಹೊಸದುರ್ಗ, ವಿದ್ಯಾನಗರ, ಮೇಲ್ಪರಂಬ, ಚಂದೇರ ಪೊಲೀಸ್‌ ಠಾಣಾ ವ್ಯಾಪ್ತಿ ಹಾಗೂ ಪರಪ್ಪ, ಒಡೆಯಂಚಾಲ್‌, ಪನತ್ತಡಿ ಪೇಟೆಗಳಲ್ಲಿ 5 ಕ್ಕಿಂತ ಅಧಿಕ ಮಂದಿ ಗುಂಪು ಸೇರುವುದನ್ನು ನಿಷೇದಿಸಲಾಗಿದೆ. ಜಿಲ್ಲಾಧಿಕಾರಿಯ ಆದೇಶದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು, ವಿವಾಹ ಸಂಬಂಧ ಸಮಾರಂಭಗಳಲ್ಲಿ ಗರಿಷ್ಟ 50 ಮಂದಿ, ಮರಣ, ಉತ್ತರ ಕ್ರಿಯೆ ಸಹಿತ ಸಮಾರಂಭಗಳಲ್ಲಿ ಗರಿಷ್ಟ 20 ಮಂದಿ ಭಾಗವಹಿಸಬಹುದಾಗಿದೆ. ಅಧಿಕೃತ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಪ್ರಾರ್ಥನೆ, ರಾಜಕೀಯ ಪಕ್ಷಗಳ ಸಭೆಗಳು, ಸಾಂಸ್ಕೃತಿಕ – ಸಾಮಾಜಿಕ ಸಾರ್ವಜನಿಕ ಸಮಾರಂಭಗಳು ಇತ್ಯಾದಿ ಕಡೆ 20 ಮಂದಿ ಭಾಗವಹಿಸಲು ಮಾತ್ರ ಅನುಮತಿ ನೀಡಲಾಗುವುದು. ಹಾಗೆಯೇ ಜನ ಸೇರುವ ಸಾರ್ವಜನಿಕ ಪ್ರದೇಶಗಳಾದ ಬಸ್‌ ನಿಲ್ದಾಣ, ಮಾರುಕಟ್ಟೆ ಸಹಿತ ಕೇಂದ್ರಗಳಲ್ಲಿ ದಿನಕ್ಕೆ ಕನಿಷ್ಠ 1 ಬಾರಿ ರೋಗಮುಕ್ತ ಚಟುವಟಿಕೆ ನಡೆಸುವಂತೆ ಸ್ಥಳೀಯಾಡಳಿತ ಸಂಸ್ಥೆಗಳು ಕಾರ್ಯದರ್ಶಿಗಳಿಗೆ ಆದೇಶ ನೀಡಲಾಗಿದೆ.

Also Read  ಸೆಪ್ಟಂಬರ್ 21 ರಿಂದ ಶಾಲೆ ತೆರೆದರೂ ತರಗತಿ ನಡೆಯಲ್ಲ.!!➤ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ

 

 

error: Content is protected !!
Scroll to Top