ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದು ಎಸ್ಕೇಪ್ ➤ ಕಾರನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು

 (ನ್ಯೂಸ್ ಕಡಬ) newskadaba.com ಸುಳ್ಯ, ಅ. 03.  ಗೂನಡ್ಕ ಬಳಿ ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದೆ. ತಕ್ಷಣವೇ ಸ್ಥಳೀಯರು ಕಾರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರಾ ಗಾಯವಾಗಿದೆ. ಗಾಯಗೊಂಡಿದ್ದ ಬೈಕ್ ಸವಾರನನ್ನು ತಕ್ಷಣವೇ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲುಗುಂಡಿ ಸಮೀಪದ ಗೂನಡ್ಕ ಬಳಿ ಮಹೀಂದ್ರ ಕಾರೋಂದು ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಎಸ್ಕೇಪ್ ಆಗಿದೆ. ಇದನ್ನ ಗಮನಿಸಿದ ಸ್ಥಳೀಯರಾದ ಲಕ್ಷ್ಮೀಶ್ ಪಾಲ್ತಾಡು ಎಂಬುವವರು ಕಾರನ್ನು ಬೆನ್ನಟ್ಟಿ ಮರ್ಕಂಜದಲ್ಲಿ ಕಾರನ್ನು ತಡೆದು ನಿಲ್ಲಿಸಿ ಸ್ಥಳೀಯರ ಸಹಕಾರದೊಂದಿಗೆ ಪೊಲೀಸರಿಗೆ ಒಪ್ಪಿಸಿದ್ದಾರೆ.

Also Read  ‘ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ’

 

error: Content is protected !!
Scroll to Top