ವಿಶ್ವದ ಅತಿ ಉದ್ದದ ಅಟಲ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಶಿಮ್ಲಾ, ಅ. 03ಹಿಮಾಚಲ ಪ್ರದೇಶದ ಮನಾಲಿ ಮತ್ತು ಲೇಹ್ ಅನ್ನು ಸಂಪರ್ಕಿಸುವ ಜಗತ್ತಿನ ಅತೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರಮೋದಿ ಅವರು ಶನಿವಾರ ಉದ್ಘಾಟನೆ ಮಾಡಿದರು.

 

ಈ ಐತಿಹಾಸಿಕ ಉದ್ಘಾಟನಾ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌ , ಮುಖ್ಯಮಂತ್ರಿ ಜೈರಾಮ್‌ ಠಾಕೂರ್‌ ಅವರೂ ಭಾಗವಹಿಸಿದ್ದರು.ಮನಾಲಿಯನ್ನು ಲೇಹ್‌ಗೆ ಸಂಪರ್ಕಿಸುವ 9.02 ಕಿ.ಮೀ ಉದ್ದದ ಅಟಲ್ ಸುರಂಗವು ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾಗಿದೆ. ಈ ಮಾರ್ಗ ಮನಾಲಿ-ಲೇಹ್‌ ನಡುವಿನ ದೂರವನ್ನು 46. ಕಿ.ಮೀ ನಷ್ಟು ಕಡಿತಗೊಳಿಸುವ ಜತೆಗೆ, ನಾಲ್ಕರಿಂದ ಐದು ಗಂಟೆಗಳವರೆಗೆ ಪ್ರಯಾಣದ ಅವಧಿಯನ್ನು ಕಡಿತಗೊಳಿಸಲಿದೆ. ಈಗ ಸುರಂಗ ನಿರ್ಮಾಣವಾಗಿರುವುದರಿಂದ, ವರ್ಷಪೂರ್ತಿ ಮನಾಲಿಯಿಂದ ಲಹೌಲ್‌ – ಸ್ಪಿತಿ ಕಣಿವೆಗೆ ಸಂಚರಿಸಬಹುದಾಗಿದೆ. ಹಿಮಾಲಯದ ಪಿರ್ ಪಂಜಾಲ್ ಶ್ರೇಣಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ (ಎಂಎಸ್‌ಎಲ್) 3,000 ಮೀಟರ್ (10,000 ಅಡಿ) ಎತ್ತರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಈ ಸುರಂಗವನ್ನು ನಿರ್ಮಿಸಲಾಗಿದೆ. ಈ ಸುರಂಗ 10 ವರ್ಷಗಳಲ್ಲಿ ಪೂರ್ಣಗೊಳಿಸಲಾಗಿದೆ.

Also Read  ಭಾರೀ ಪ್ರವಾಹದಿಂದಾಗಿ ನೀರಿನಲ್ಲಿ ಕೊಚ್ಚಿಹೋದ ಶಾಲಾ ಬಸ್..!! ➤ ಇಬ್ಬರು ಗಂಭೀರ

 

 

error: Content is protected !!
Scroll to Top