ಮಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಗೆ ಪೊಲೀಸರ ದಾಳಿ ➤ ಮೂವರ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಮಂಗಳೂರು, ಅ.04: ಮಂಗಳೂರಿನ ವೆಲೆನ್ಸಿಯಾದಲ್ಲಿ ಪ್ಲ್ಯಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಬೆಂಗಳೂರು ಮೂಲದ ಇಬ್ಬರು ಯುವತಿಯರನ್ನು ರಕ್ಷಿಸಿ, ಮೂವರನ್ನು  ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವೆಲೆನ್ಸಿಯಾದ ಈ ಪ್ಲ್ಯಾಟ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪಾಂಡೇಶ್ವರ ಪೊಲೀಸ್ ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದ ತಂಡ ದಾಳಿ ನಡೆಸಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಗಳಾದ ಗಣೇಶ್ ಶೆಟ್ಟಿ, ಪ್ಲ್ಯಾಟ್ ಓನರ್ ಹಫೀಜ್ ಮತ್ತು ಸಹಕರಿಸುತ್ತಿದ್ದ ಹರಿಣಾಕ್ಷಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳುತ್ತಿದ್ದ ಪಾದಯಾತ್ರಿಕರಿಗೆ ► ಕುಂತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಮಧ್ಯಾಹ್ನದ ಭೋಜನದ ವ್ಯವಸ್ಥೆ

error: Content is protected !!