ಟ್ರಬಲ್ ಶೂಟರ್​ಗೆ ಮತ್ತೊಂದು ಸಂಕಷ್ಟ ➤ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಟ್ರಬಲ್ ಶೂಟರ್, ಕನಕಪುರ ಬಂಡೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ. ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾಗಿರುವಾಗ ನಡೆದಿರುವ ದಾಳಿ ರಾಜಕೀಯ ಸ್ವರೂಪ ಪಡೆಯುವ ನಿರೀಕ್ಷೆ ಇದೆ.

ಸೋಮವಾರ ಬೆಳಗ್ಗೆ ಐವರು ಅಧಿಕಾರಿಗಳ ತಂಡ ಸದಾಶಿವ ನಗರದಲ್ಲಿರುವ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಮನೆಯಲ್ಲಿಯೇ ಅಧಿಕಾರಿಗಳು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ದಾಳಿ ನಡೆದಿತ್ತು. ಬಳಿಕ ಇಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಸುಮಾರು 50 ದಿನಗಳ ಕಾಲ ಡಿ. ಕೆ. ಶಿವಕುಮಾರ್ ಜೈಲಿನಲ್ಲಿದ್ದರು. ಇಂದು ಮುಂಜಾನೆ 6 ಗಂಟೆಗೆ ಸಿಬಿಐ ದಾಳಿ ನಡೆಸಲಾಗಿದೆ.

Also Read  ಸಾಲಮನ್ನಾ ಇಂದು ಫ್ಯಾಶನ್ ಆಗಿದೆ: ವೆಂಕಯ್ಯ ನಾಯ್ಡು ಲೇವಡಿ

 

 

ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದಿಂದ ಹಣ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಹಿನ್ನೆಲೆಯಲ್ಲಿ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆದಿರುವ ಸಾಧ್ಯತೆಯಿದೆ. ಇದೀಗ ಡಿಕೆ ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

error: Content is protected !!
Scroll to Top