(ನ್ಯೂಸ್ ಕಡಬ) newskadaba.com ಉಡುಪಿ, ಅ. 05. ಸಹಪಾಠಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ವಿದ್ಯಾರ್ಥಿಯನ್ನು ಬಂಧಿಸಿರುವ ಪೊಲೀಸರು 14.94 ಲಕ್ಷ ರೂ. ಮೌಲ್ಯದ ನಿಷೇಧಿತ ನಿದ್ರಾಜನಕ ಎಂಡಿಎಂಎ ಮಾತ್ರೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಣಿಪಾಲ ಕಾಲೇಜಿನ ಇನ್‌ಸ್ಟ್ರುಮೆಂಟೇಶನ್ ಆ್ಯಂಡ್ ಕಂಟ್ರೋಲ್ ವಿಭಾಗದ 7ನೇ ಸೆಮಿಸ್ಟರ್‌ನ ವಿದ್ಯಾರ್ಥಿ, ಉತ್ತರ ಭಾರತ ಮೂಲದ ಹಿಮಾಂಶು ಜೋಷಿ(20) ಬಂಧಿತ ಆರೋಪಿ. ಆಂತರಿಕ ಭದ್ರತಾ ವಿಭಾಗದ ಮಾಹಿತಿ ಮೇರೆಗೆ ಉಡುಪಿ ಐಎಸ್‌ಡಿ ಘಟಕ ಮತ್ತು ಮಣಿಪಾಲ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿದ್ದು, ಶೀಂಬ್ರಾ ಸೇತುವೆ ಬಳಿ ಬೈಕ್ ನಿಲ್ಲಿಸಿ ನಿಷೇಧಿತ ಮಾತ್ರೆಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 498 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಅಕ್ರಮವಾಗಿ ಆನ್‌ಲೈನ್ ಮೂಲಕ ಎಂಡಿಎಂಎ ಮಾತ್ರೆಗಳನ್ನು ತರಿಸಿ, ಮಣಿಪಾಲದ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಡ್ರಗ್ಸ್ ಜಾಲವನ್ನು ಪೊಲೀಸರು ಭೇದಿಸಿದ್ದರು. ಬಂಧಿತನ ಜತೆಗಿದ್ದ ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.