ಇನ್ನುಂದೆ ಮಾಸ್ಕ್‌ ಹಾಕದೆ ಸಿಕ್ಕಿಬಿದ್ದರೆ ಎಷ್ಟು ಮೊತ್ತದ ದಂಡ ಗೊತ್ತೇ..!!?

(ನ್ಯೂಸ್ ಕಡಬ) newskadaba.com ಮಂಗಳೂರು, ಅ.05: ಕೊರೋನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರಕಾರದಿಂದ ಕಟ್ಟು ನಿಟ್ಟಾಗಿ ಆದೇಶಗಳನ್ನು  ಹೊರಡಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧರಿಸಿದ್ದು, ಕೊರೋನಾ ಮಾರ್ಗಸೂಚಿಯನ್ನು ಉಲ್ಲಂಘಿಸುವವರು ಇನ್ನು ಮುಂದೆ ಬಹಳ ಎಚ್ಚರವಾಗಿರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಹಾಕದೆ ಸಿಕ್ಕಿಬಿದ್ದರೇ ಇಂದಿನಿಂದ, ಭಾರೀ ದಂಡ ಪಾವತಿಸಬೇಕಾಗುತ್ತದೆ.

ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ ಜನರಿಗೆ 1,000 ರೂ.ಗಳ ದಂಡ ಮತ್ತು ಇತರ ಸ್ಥಳಗಳಲ್ಲಿ ಮಾಸ್ಕ್‌ ಹಾಕದವರಿಗೆ 500 ರೂ. ವರೆಗೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಈವರೆಗೆ ಮಾಸ್ಕ್‌ ಧರಿಸದವರಿಗೆ 200 ರೂ. ದಂಡ ವಿಧಿಸಲಾಗುತ್ತಿತ್ತು. ಕೊರೊನಾ ಜಾಗೃತಿ ಅಭಿಯಾನವನ್ನು ಆಗಾಗೇ ಕೈಗೊಂಡಿದ್ದರೂ ಕೂಡಾ ಜನರು ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ದಂಡವನ್ನು ಹೆಚ್ಚಿಸಿದೆ. ದಂಡದ ಹೆಚ್ಚಳದಿಂದಾದರೂ ಜನರು ಮಾರ್ಗಸೂಚಿಗಳನ್ನು ಪಾಲಿಸುತ್ತಾರೆ ಎಂಬ ನಿರೀಕ್ಷೆ ಸರ್ಕಾರಕ್ಕಿದೆ.

Also Read  ಪುತ್ತೂರು: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವಿ.ಪಿ ಕಾರ್ಯಪ್ಪ ಅಧಿಕಾರ ಸ್ವೀಕಾರ

error: Content is protected !!
Scroll to Top