ಪುಣಚದಲ್ಲಿ ರಸ್ತೆ ಅತಿಕ್ರಮಣ ಪ್ರಕರಣ ➤ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಪುಣಚ, ಅ. 05. ಪುಣಚ ಗ್ರಾಮ ಪಂಚಾಯತಿ ಸುಪರ್ದಿಯಲ್ಲಿರುವ ಪದವು ಕೊಪ್ಪಳ ಸಾರ್ವಜನಿಕ ರಸ್ತೆಯನ್ನು ಜಯಂತಿ ಹಾಗೂ ಬಬಿತ ಎಂಬುವರು ಅತಿಕ್ರಮಿಸಿ ಬಲವಂತವಾಗಿ ಬೇಲಿ ನಿರ್ಮಿಸಿ ರಸ್ತೆಯನ್ನು ಮುಚ್ಚಿ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಿರುವುದರ ವಿರುದ್ಧ ದ. ಜಿಲ್ಲಾ ದಲಿತ್ ಸೇವಾ ಸಮಿತಿಯ ನೇತೃತ್ವದಲ್ಲಿ ಇಂದು (ಅ.05) ಪುನಾಚ ಗ್ರಾಮ ಪಂಚಾಯತಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೂಡಲೇ ರಸ್ತೆ ಸರ್ವೇ ನಡೆಸಿ ಸಮಸ್ಯೆ ಇತ್ಯಾರ್ಥಗೊಳಿಸಬೇಕು . ತಪ್ಪಿದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ದಲಿತ್ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಸೇಸಪ್ಪ ಬಿ,ಕೆ ಎಚ್ಚರಿಸಿದರು.  ಬಳಿಕ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯ ವಿರುದ್ಧ ಘೋಷಣೆ ಕೂಗಲಾಯಿತು. ಇನ್ನು, ಪಂಚಾಯಿತಿ ಪಿಡಿಒ ಲಾವಣ್ಯ ಪ್ರತಿಭಟನಕಾರರ ಬೇಡಿಕೆ ಅಹವಾಲನ್ನು ಸ್ವೀಕರಿಸಿ 10 ದಿನಗಳೊಳಗೆ ಸ್ಥಳ ಸರ್ವೇ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಲಿಖಿತ ಭರವಸೆ ನೀಡಿದರು.

Also Read  ದಿನ ಭವಿಷ್ಯ - ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

 

error: Content is protected !!
Scroll to Top