ದಿ .ಮುತ್ತಪ್ಪ ರೈ ನಿವಾಸದ ಮೇಲೆ ಸಿಸಿಬಿ ದಾಳಿ ➤ ಪುತ್ರ ರಿಕ್ಕಿ ರೈ ಡ್ರಗ್ಸ್ ಜಾಲದ ನಂಟು ಹೊಂದಿರುವ ಶಂಕೆ..!!?

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 06. ಇತ್ತೀಚೆಗೆ ನಿಧನರಾದ ಮಾಜಿ ಡಾನ್ ಮುತ್ತಪ್ಪ ರೈ ಅವರ ಮನೆಗೆ ಸಿಸಿಬಿ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿದ್ದಾರೆ. ದಿ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಡ್ರಗ್ಸ್ ಜಾಲದ ನಂಟು ಹೊಂದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಸಂಪೂರ್ಣ ಮಾಹಿತಿ ಕಲೆ ಹಾಕಿರುವ ಸಿಸಿಬಿ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಇಂದು ಬೆಳಿಗ್ಗೆ ಎರಡೂ ಮನೆಗಳಿಗೆ ದಾಳಿ ಮಾಡಲಾಗಿದೆ.

ಮುತ್ತಪ್ಪ ರೈಗೆ ಸೇರಿದ ಎರಡು ಕಡೆ ಸಿಸಿಬಿ ದಾಳಿ ಮಾಡಿದೆ. ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುತ್ತಪ್ಪ ರೈ ಮಗ ರಿಕ್ಕಿ ಮನೆ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಮನೆಯಲ್ಲಿ ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯ ಮಾಡುತ್ತಿದ್ದಾರೆ. ಮುತ್ತಪ್ಪ ರೈ ಮಗ ಡಿಕ್ಕಿ ಡ್ರಗ್ ಪೆಡ್ಲರ್ಸ್ ರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Also Read  ಸಾಲಗಾರರ ಕಿರುಕುಳದಿಂದ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!

 

error: Content is protected !!
Scroll to Top