ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬು ಇನ್ನಿಲ್ಲ!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 06: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಾಗೇಶ್ ಬಾಬು ಅವರಿಗೆ 82 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾಗೇಶ್ ಬಾಬು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ನಾಗೇಶ್ ಬಾಬು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

 

1957ರಲ್ಲಿ ಸಹಾಯಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಾಗೇಶ್ ಬಾಬು 1970ರಲ್ಲಿ ‘ಅನಿರೀಕ್ಷಿತ’ ಎಂಬ ಚಿತ್ರದ ಮೂಲಕ ಪೂರ್ಣಪ್ರಮಾಣದಲ್ಲಿ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು.ತುಳುವಿನ ಕೋಟಿ ಚೆನ್ನಯ ಚಿತ್ರಕ್ಕೆ ಅವರು ತಾಂತ್ರಿಕ ನಿರ್ದೇಶಕರಾಗಿದ್ದರು.

Also Read  ಕ್ಷುಲ್ಲಕ ವಿಚಾರಕ್ಕೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ➤ ಪ್ರಕರಣ ದಾಖಲು

 

 

error: Content is protected !!
Scroll to Top