(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 07: ರಾಜ್ಯದಲ್ಲಿ ದಿನ ಕಳೆದಂತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಇದರ ಜೊತೆಗೆ ಕೊವೀಡ್ ಗೆ ಬಲಿಯಾಗುತ್ತಿರುವವರ ಸಂಖ್ಯೆಯು ಹೆಚ್ಚಾಗುತ್ತಲೇಯಿದೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಮರೆತು ಸಾರ್ವಜನಿಕರು ನಿಲ್ರ್ಯಕ್ಷ ತೋರುತ್ತಿದ್ದಾರೆ. ಹೀಗಿರುವಾಗ ಸರ್ಕಾರದಿಂದ ಗುರುತಿಸಲ್ಪಡುವ ವ್ಯಕ್ತಿ ಕೊರೊನಾ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಇಲ್ಲದಿದ್ದರೆ 50 ಸಾವಿರ ರೂ. ವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸಲು ಮುಂದಾಗಿದೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಹೊಸ ಆದೇಶವನ್ನು ಹೊರಡಿಸಿದ್ದು, ಕೊರೊನಾ ದೃಢವಾಗಿರುವ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರು ಕೋರೊನಾ ಪರೀಕ್ಷೆಗೆ ಒಳಪಡಬೇಕು ಎಂದು ತಿಳಿಸಿದೆ.ಈ ಆದೇಶವನ್ನು ಕರ್ನಾಟಕ ಸಾಂಕ್ರಮಿಕ ರೋಗಿಗಳ ಸುಗ್ರೀವಾಜ್ಞೆ-2020 ರ 4 ನೇ ವಿಧಿಯಡಿ ವಿಧಿಸಲಾಗಿದ್ದು, ಕೋವಿಡ್ ದೃಢವಾಗಿರುವ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರು ಜ್ವರದ ಲಕ್ಷಣಗಳಿರುವ ವ್ಯಕ್ತಿಗಳು ಉಸಿರಾಟ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವವರು ಕೋವಿಡ್ 19 ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರು, ಸಿಬ್ಬಂದಿ, ಕಂಟೈನ್ ಮೆಂಟ್ ಮತ್ತು ಬಫರ್ ವಲಯದಲ್ಲಿನ ವ್ಯಕ್ತಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.